ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು ?
ನಿನ್ನೆದೆಯ ದನಿಯೆ ಋಷಿ ! ಮನು ನಿನಗೆ ನೀನು !
ನೀರಡಿಸಿ ಬಂದ ಸೋದರಗೆ ನೀರನು ಕೊಡಲು
ಮನುಧರ್ಮಶಾಸ್ತ್ರವೆನಗೊರೆಯಬೇಕೇನು ?
ನೊಂದವರ ಕಂಬನಿಯನೊರಸಿ ಸಂತೈಸುವೊಡೆ
ಶಾಸ್ತ್ರ ಪ್ರಮಾಣವದಕಿರಲೆ ಬೇಕೇನು ?
ಪಂಚಮರ ಶಿಶುವೊಂದು ಕೆರೆಯಲ್ಲಿ ಮುಳುಗುತಿರೆ
ದಡದಲ್ಲಿ ಮಿಯುತ್ತ ನಿಂತಿರುವ ನಾನು
ಮುಟ್ಟಿದರೆ ಬ್ರಹ್ಮತ್ವ ಕೆಟ್ಟುಹೋಗುವುದೆಂದು
ಸುಮ್ಮನಿದ್ದರೆ ಶಾಸ್ತ್ರಸಮ್ಮತವದೇನು?
ಅಂತು ಮನು ತಾನು ಹೆಲಿರಲಾರನಯ್ಯಯ್ಯೊ!
ಹೇಳಿದ್ದರವನನೂ ಶಾಸ್ತ್ರದೊಳೆ ಸುತ್ತಿ,
ಸ್ವರ್ಗ ಹೋಗಲಿ, ಮತ್ತೆ ನರಕ ಬಂದರು ಬರಲಿ,
ಎದೆಯ ಧೈರ್ಯವ ಮಾಡಿ ಬಿಸುಡಾಚೆಗೆತ್ತಿ!
ಸ್ವರ್ಗ ಹೋಗುವುದಿಲ್ಲ, ನರಕ ಬರುವುದು ಇಲ್ಲ;
ಸ್ವರ್ಗ ನರಕಗಳೇನು ಶಾಸ್ತ್ರಸ್ಥವಲ್ಲ .
ಎದೆಯ ದನಿ ಧರ್ಮನಿಧಿ ! ಕರ್ತವ್ಯವದುವೆ ವಿಧಿ !
ನಂಬದನು; ಅದನುಳಿದು ಋಷಿಯು ಬೇರಿಲ್ಲ!
ಹಿಂದಿನಾ ಋಷಿಗಳೂ ಮಾನವರೆ ನಮ್ಮಂತೆ,
ಅವರ ಶಾಸ್ತ್ರವು ಅವರ ಕಾಲಕ್ಕೆ ಮಾತ್ರ;
ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ,
ನಮ್ಮ ಹೃದಯವೆ ನಮೆಗೆ ಶ್ರೀಧರ್ಮಸೂತ್ರ !
- ಕುವೆಂಪು
( 'ಕೋಗಿಲೆ ಮತ್ತು ಸೋವಿಯಟ್ ರಷ್ಯ' ಕವನಸಂಕಲನದಿಂದ )
Summary of this poem
ಪ್ರತ್ಯುತ್ತರಅಳಿಸಿAkshay Kumar j
ಅಳಿಸಿKuvampu
ಅಳಿಸಿSahitya prakatisiruvudakke dhanyavadagalu.
ಪ್ರತ್ಯುತ್ತರಅಳಿಸಿLa akshara sari maadi in "Heliralara"
ಎಂತಾ ಅದ್ಭುತದವಾದ ಸಾಲುಗಳು.... ಸಮಾಜದಲ್ಲಿ ಬದುಕುವ ಪ್ರತಿಯೊಬ್ಬ ವೇಕ್ತಿಯು ಈ ಸಾಲುಗಳನ್ನು ಅರ್ಥ ಮಾಡ್ಕೊಂಡ್ರೆ ಸಾಕು ಜೀವನ ಸುಗಮವಾಗಿ ಸಾಗುವುದರ ಜೊತೆಗೆ ಸಮಾಜ ಕೂಡ ಒಳ್ಳೆಯರಿತಿಯಲ್ಲಿ ಇರುತ್ತೆ...
ಪ್ರತ್ಯುತ್ತರಅಳಿಸಿಜೀವನದ ಸತ್ಯತೆಯನ್ನು ತಿಳಿಸುವ ಸಾಲುಗಳು 🙏
ದನಿಗೂ
ಅಳಿಸಿYavakalada shasthra yanuhaladiranu
ಅಳಿಸಿಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
ಪ್ರತ್ಯುತ್ತರಅಳಿಸಿjayakumarcsj@gmail.com