ನಾನು ಕವಿಯಲ್ಲ.
ಕಲೆಗಾಗಿ ಕಲೆಯೆಂಬ
ಹೊಳ್ಳು ನೆಲೆಯಿಲ್ಲ.
ಮೆಚ್ಚುಗೆಯೆ ನನಗೆ ಕೊಲೆ;
ಬದುಕುವುದೆ ನನಗೆ ಬೆಲೆ.
ಸಾಧನೆಯ ಛಾಯೆ ಕಲೆ;
ವಿಶ್ವಾತ್ಮವದಕೆ ನೆಲೆ.
ನಿನಗದು ಚಮತ್ಕಾರ;
ನನಗೊ ಸಾಕ್ಷಾತ್ಕಾರ!
ಮೌನದಿಂದನುಭವಿಸು:
ಕೋ ನಮಸ್ಕಾರ!
ಕಲೆಯೆಂದು ಹೊಗಳುವೊಡೆ:
ಕೋಟಿ ಧಿಕ್ಕಾರ!
- ಕುವೆಂಪು
( 'ಕೋಗಿಲೆ ಮತ್ತು ಸೋವಿಯತ್ ರಷ್ಯ' ಕವನಸಂಕಲನದಿಂದ )
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಉನ್ಮಾದದ ನಶೆ ನಮ್ಮೊಂದಿಗಿಷ್ಟು ಹಂಚಿಕೊಳ್ರಿ....