ಚಿತ್ರ ಕೃಪೆ: weheartit.com |
ಮಾರಿ ಕಣ್ಣಿಗೆ ಮರುಳರಾಗಿ
ನೆಚ್ಚಿ ಮೆಚ್ಚಿ ಕೂಡಿದ್ದೇವs
ಬೇರೆ ಇಲ್ಲಾ। ಇದ್ದಾರೆ ಶಿವನೆ ಬಲ್ಲಾ.
ಯಾಕ? ಏನು? ಎಲ್ಲಿಗಂತs
ನಾಕು ಮಾತು ಕೂಡಾ ನಾವು
ಒಬ್ಬರಿಗೊಬ್ಬರು ಆಗs
ಕೇಳಲಿಲ್ಲಾ। ಉತ್ತರಾ ಹೇಳಲಿಲ್ಲಾ
ಹೆಣ್ಣು ಮಣ್ಣು ಹಾsಳಂತs
ಬಣ್ಣ ಕಡೆಬಾಳದಂತs
ಬಾಳುವೀ ಸುಳ್ಳಾಟಂತs
ಹೆದರಲಿಲ್ಲಾ। ಯಾರೂ ಹೆದರಿಸಲಿಲ್ಲಾ
ಆಡಿದ್ದೊಂದs ನೋಡಿದ್ದೊಂದs
ಹೂಡಿದ್ದೊಂದs ಕೂಡಿದ್ದೊಂದs
ಬೇರೆ ಮಾತು ನನಗ ನಿನಗs
ಗೊತ್ತs ಇಲ್ಲಾ। ಗುಟ್ಟು ಶಿವನೆ ಬಲ್ಲಾ.
- ದ ರಾ ಬೇಂದ್ರೆ
('ನಾದಲೀಲೆ' ಕವನ ಸಂಕಲನದಿಂದ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಉನ್ಮಾದದ ನಶೆ ನಮ್ಮೊಂದಿಗಿಷ್ಟು ಹಂಚಿಕೊಳ್ರಿ....