Light and darkness Photography by Leszek Bujnowski |
ಕರುಣಾಳು ಬಾ ಬೆಳಕೆ ಮುಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು
ಹೇಳಿ ನನ್ನಡಿಯಿಡಿಸು ಬಲುದೂರ ನೋಟವನು
ಕೇಳನೊಡನೆಯೆ ಸಾಕು ನನಗೊಂದು
ಹೆಜ್ಜೆಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು
ಇಷ್ಟುದಿನ ಸಲಹಿರುವೆ ಈ ಮೂರ್ಖನನು ನೀನು ಮುಂದೆಯೂ
ಕೈ ಹಿಡಿದು ನಡೆಸದಿಹೆಯಾ
ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯಾ?
ಬೆಳಗಾಗ ಹೊಳೆಯದೆಯೆ ಹಿಂದೊಮ್ಮೆ ನಾನೊಲಿದು
ಈ ನಡುವೆ ಕಳಕೊಂಡೆ ದಿವ್ಯ ಮುಖ ನಗುತ
- ಬಿ.ಎಂ. ಶ್ರೀಕಂಠಯ್ಯ
('ಇಂಗ್ಲೀಷ್ ಗೀತೆಗಳು' ಕವನ ಸಂಕಲನದಿಂದ)
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
ಪ್ರತ್ಯುತ್ತರಅಳಿಸಿ