ದೀಪದ ಹೆಜ್ಜೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ದೀಪದ ಹೆಜ್ಜೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಹಿನ್ನುಡಿ

ಅದೂ ಬೇಕು ಇದೂ ಬೇಕು
ಎಲ್ಲವೂ ಬೇಕು ನನಗೆ.
ದಾರಿ ನೂರಾರಿವೆ ಬೆಳಕಿನರಮನೆಗೆ!
ಬೇಡ ನನಗೆ ಸಿದ್ಧಾಂತಗಳ ರಾದ್ಧಾಂತ;
ನನಗಿಲ್ಲ, ಇದೇ ಸರಿ ಇಷ್ಟೇ ಸರಿ ಎನುವ ಪಂತ.
ನಾ ಬಲ್ಲೆ, ಇವು ಎಲ್ಲ ಏರುವೆಯ
ಒಂದೊಂದು ಹಂತ.
ನೂರಾರು ಭಾವದ ಬಾವಿ; ಎತ್ತಿಕೋ
ನಿನಗೆ ಬೇಕಾದಷ್ಟು ಸಿಹಿನೀರ.
ಪಾತ್ರೆಯಾಕಾರಗಳ ಕುರಿತು ಏತಕೆ ಜಗಳ?
ನಮಗೆ ಬೇಕಾದದ್ದು ದಾಹ ಪರಿಹಾರ.

            - ಜಿ ಎಸ್ ಶಿವರುದ್ರಪ್ಪ
   ("ದೀಪದ ಹೆಜ್ಜೆ" ಕವನಸಂಕಲನದಿಂದ)